Women is a Supreme power | ಹೆಣ್ಣು ಒಂದು ಸರ್ವೋಚ್ಚ ಶಕ್ತಿ
Index of Important Points
ಯತ್ರ ನಾರ್ಯಸ್ತು ಪೂಜ್ಯಂತೆ ತತ್ರ ರಮಂತೇ ದೇವತಾ:|
ಮನುಸ್ಮೃತಿಯಿಂದ ಆಯ್ದ ಉಲ್ಲೇಖಗಳು
ಯತ್ರೈತಾಸ್ತು ನ ಪೂಜ್ಯಂತೆ ಸರ್ವಾಸ್ತತ್ರಾಫಲಾ: ಕ್ರಿಯಾ: ||
ಎಲ್ಲಿ ಸ್ತ್ರೀಯರು ಗೌರವಿಸಲ್ಪಡುತ್ತಾರೋ ಅಲ್ಲಿ ದೇವತೆಗಳು ಸಂತುಷ್ಟರಾಗಿರುತ್ತಾರೆ. ಸ್ತ್ರೀಯರನ್ನೆಲ್ಲಿ ಅವಮಾನಗೊಳಿಸಲಾಗುತ್ತದೋ ಅಲ್ಲಿ ಮಾಡಿದ ಕಾರ್ಯಗಳೆಲ್ಲವೂ ವ್ಯರ್ಥ
ಶೋಚಂತಿ ಜಾಮಯೋ ಯತ್ರ ವಿನಶ್ಯತ್ಯಾಶು ತತ್ಕುಲಮ್|
ಮನುಸ್ಮೃತಿಯಿಂದ ಆಯ್ದ ಉಲ್ಲೇಖಗಳು
ನ ಶೋಚಂತಿ ತು ಯತ್ರೈತಾ ವೃಧ್ಧತೇ ತದ್ಧಿ ಸರ್ವದಾ||
ಮನೆಯೊಂದರಲ್ಲಿ ಮಗಳು, ಸೊಸೆ, ಅಕ್ಕತಂಗಿಯರು ಮತ್ತಿತರ ಸ್ತ್ರೀಯರು ನರಳಿದಲ್ಲಿ, ಖಂಡಿತವಾಗಿಯು ಆ ಮನೆ ನಾಶವಾಗುತ್ತದೆ. ಸಂತೋಷವಾಗಿದ್ದಲ್ಲಿ, ಸುಖ, ಸಂಪತ್ತು ವರ್ಧಿಸುತ್ತದೆ
ಜಾಮಯೋ ಯಾತಿ ಮೋಹಾನಿ ಸಂಪತ್ಯ ಪ್ರತಿಪೂಜಿತಾ:|
ಮನುಸ್ಮೃತಿಯಿಂದ ಆಯ್ದ ಉಲ್ಲೇಖಗಳು
ತಾತಿ ಕೃತ್ಯಾಹತಾನೀವ ವಿನಶ್ಯಂತಿ ಸಮನ್ವತ:||
ಯಾವ ಮನೆಯಲ್ಲಿ ಹೆಂಡತಿ, ಮಗಳು, ಅಕ್ಕತಂಗಿಯರು, ಸೊಸೆಯಂದಿರು ಗೌರವಿಸಲ್ಪಡುವುದಿಲ್ಲವೋ, ಅವಮರ್ಯಾದೆಗೊಳಗಾಗುತ್ತಾರೋ ಆ ಮನೆ ಖಂಡಿತವಾಗಿಯು ನಾಶವಾಗುತ್ತದೆ
‘ಅತಿಥಿ ದೇವೋ ಭವ’ ಎಂದು ನಂಬಿದ್ದರೂ, ಎಲ್ಲರಿಗಿಂತ ಮೊದಲು ಅತಿಥಿಗಳನ್ನು ಸತ್ಕರಿಸುತ್ತಿದ್ದರೂ,
ಸುವಾಸಿನೀ: ಕುಮಾರಂಶ್ಚ ರೋಗಿಣೋ ಗರ್ಭಿಣೀ: ಸ್ತ್ರೀಯ:|
ಮನುಸ್ಮೃತಿಯಿಂದ ಆಯ್ದ ಉಲ್ಲೇಖಗಳು
ಅತಿಥಿಭ್ಯೋಗ್ರ ಎವೈತಾನ್ ಭೊಜಯೇದವಿಚಾರಯನ್||
ಸುವಾಸಿನಿಯರೂ, ಕುಮಾರಿಯರೂ, ಗರ್ಭಿಣಿ ಸ್ತ್ರೀಯರು, ಇವರೇ ಮೊದಲಾದ ಸ್ತ್ರೀಯರು ಅತಿಥಿಗಳಿಗೂ ಮೊದಲು ಸತ್ಕರಿಸಲ್ಪಡಬೇಕು
ಇನ್ನು ತಾಯಿಯ ಪಾತ್ರದ ಬಗ್ಗೆ ಹೇಳುವುದೇನಿದೆ?
ಉಪಾಧ್ಯಾಯಾಂದಶಾಚಾರ್ಯ ಆಚಾರ್ಯಾಣಮ್ ಶತ೦ ಪಿತಾ|
ಮನುಸ್ಮೃತಿಯಿಂದ ಆಯ್ದ ಉಲ್ಲೇಖಗಳು
ಸಹಸ್ತ್ರ೦ ತು ಪಿತೃನ್ಮಾತಾ ಗೌರವೇಣಾತಿರಿಚ್ಯತೇ||
ಗುರುವುಗಿಂತ ಆಚಾರ್ಯರೂ, ಆಚಾರ್ಯರಿಗಿಂತ ತಂದೆಯು, ಎಲ್ಲರಿಗಿಂತ ಹೆಚ್ಚಾಗಿ ತಾಯಿಯು ಪೂಜನೀಯವಾಗಿರುತ್ತಾರೆ
ಸ್ತ್ರೀರಕ್ಷಣೆ ರಾಜಧರ್ಮ: ಶಿವಾಜಿಯ ಕಥೆ:
ಒಮ್ಮೆ ಶಿವಾಜಿ ಕಲ್ಯಾಣಪ್ರಾಂತ್ಯವನ್ನು ಗೆದ್ದು ಅಪಾರ ಸಂಪತ್ತನ್ನು ಸಂಪಾದಿಸಿರುತ್ತಾರೆ.
ಆಭಾಜಿಪಂಥ್, ಯುದ್ಧವನ್ನು ಗೆದ್ದ ಸೇನಾಪತಿ, ಸುಂದರ ಸ್ತ್ರೀಯೊಬ್ಬಳು ದೊರಕಿದ್ದಾಳೆ, ಅವಳನ್ನೂ ಮಹರಾಜರಿಗೆ ಸಮರ್ಪಿಸುತ್ತಿದ್ದೇನೆ ಎನ್ನುತ್ತಾನೆ.
ಆಕೆ ಯುಧ್ಧದಲ್ಲಿ ಸೋತಿದ್ದ ಮುಘಲ್ ಸುಬೇದಾರನ ಕುಟುಂಬದ ಹೆಣ್ಣುಮಗಳು.
ಅದಕ್ಕೆ ಶಿವಾಜಿ, ‘ಆಕೆ ತುಂಬಾ ಸುಂದರವಾಗಿದ್ದಾಳೆಂದು ಹೇಳುತ್ತಿದ್ದೀಯೆ. ಆಕೆ ನನ್ನ ತಾಯಿಯ ಸಮಾನ. ನಾನಾಕೆಯನ್ನು ಪ್ರೀತಿಸುತ್ತೇನೆ ಮತ್ತು ಗೌರವಿಸುತ್ತೇನೆ. ಎಲ್ಲಕ್ಕಿಂತ ಹೆಚ್ಚಾಗಿ ಸ್ತ್ರೀರಕ್ಷಣೆ ರಾಜಧರ್ಮ’ ಎಂದು ಹೇಳಿ, ಸಕಲ ಗೌರವ ಮರ್ಯಾದೆಗಳೊಂದಿಗೆ ಹಿಂತಿರುಗಿಸುತ್ತಾನೆ.
ಆಗ ಸುಬೇದಾರನಿಗೆ ಹೆಣ್ಣಿಗೆ ಈ ಮಣ್ಣಿನಲ್ಲಿ ಕೊಡುವ ಮರ್ಯಾದೆಯ ಅರಿವಾಗುತ್ತದೆ.
ನಿನ್ನ ಹೆಂಡತಿಯನ್ನು ಹೊರತು ಪಡಿಸಿ ಮಿಕ್ಕೆಲ್ಲ ಸ್ತ್ರೀಯರು ನಿನಗೆ ಪರಸ್ತ್ರೀಯರು. ಅವರನ್ನು ನಿನ್ನ ತಾಯಿಯರಂತೆಯು, ಅಕ್ಕ ತಂಗಿಯರಂತೆಯೂ ಕಾಣು ಎಂದಿದ್ದಾರೆ ಹಿರಿಯರು.
ಬಹುಶ: ನಮ್ಮ ಸಂಸ್ಕೃತಿಯ ಬಗ್ಗೆ ನಾವೇ ಹೇಳುವುದು ರುಚಿಸದಿದ್ದಲ್ಲಿ, ಪಾಶ್ಚಿಮಾತ್ಯ Kerry Brown ತನ್ನ ‘The Essential Teachings of Hinduism’ ಎಂಬ ಪುಸ್ತಕದಲ್ಲಿ ಹೀಗೆ ಹೇಳುತ್ತಾರೆ – “In Hinduism a woman is looked after not because she is inferior or incapable but, on the contrary, because she is treasured. She is the pride and power of the society. Just as the crown jewels should not be left unguarded, neither should a woman be left unprotected. No extra burden of earning a living should be placed on women who already bear huge responsibilities in society; childbirth; child care, domestic well being and spiritual growth. She is the transmitter of culture to her children.”
Why do people quote “Women are fire”?
Garuda purana mentions
Somah shoucham dadau taasaam gandharvascha subhaam giram /
Source: Garuda Purana GPV1C95V19
Paavakah sarvamedhyatvah medhyaa vai yoshito yatah
Moon god has blessed women with chastity,
The Gandharvas have blessed her with the sweetness of speech.
Agni has blessed with quality of being sacred, thus the female is equally pure as fire.
“ಹೆಣ್ಣು ಎಂದರೆ ಬೆಂಕಿ” ಎಂದು ಜನರು ಏಕೆ ಹೇಳುತ್ತಾರೆ?
ಸೋಮಃ ಶೌಚಂ ದದೌ ತಾಸಾಂ ಗಂಧರ್ವಶ್ಚ ಸುಭಾಂ ಗಿರಂ /
Source: Garuda Purana GPV1C95V19
ಪಾವಕಃ ಸರ್ವಮೇಧ್ಯತ್ವಃ ಮೇಧ್ಯಾ ವೈ ಯೋಷಿತೋ ಯತಃ
ಚಂದ್ರ ದೇವರು ಹೆಣ್ಣಿಗೆ ಶುದ್ಧತೆಯನ್ನು ಅನುಗ್ರಹಿಸಿದ್ದಾನೆ, ಗಂಧರ್ವರು ಅವರಿಗೆ ಮಾತಿನ ಮಾಧುರ್ಯವನ್ನು ಅನುಗ್ರಹಿಸಿದ್ದಾರೆ. ಅಗ್ನಿ ತನ್ನ ಪಾವಿತ್ರತೆಯನ್ನು ಅನುಗ್ರಹಿಸಿದ್ದಾರೆ, ಹೀಗಾಗಿ ಹೆಣ್ಣು ಬೆಂಕಿ, ಹೆಣ್ಣು ಬೆಂಕಿಯಷ್ಟೇ ಸಮಾನವಾಗಿ ಶುದ್ಧ ಎನ್ನುತ್ತಾರೆ.
